Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ | Prakash Raj Says Atheist Yet Respectful Performs Mother’s Last Rites as per Christian Traditions

Entertainment

oi-Hitesh Y

Prakash Raj: ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಈಚೆಗೆ ಮೃತಪಟ್ಟಿದ್ದರು. ವಯೋಸಹಜ ಕಾಯಿಲೆಯಿಂದ ಅವರ ತಾಯಿ ಸ್ವರ್ಣಲತಾ(85 ) ಅವರು ಮೃತಪಟ್ಟಿದ್ದರು. ಆದರೆ, ಅವರ ಅಂತ್ಯ ಸಂಸ್ಕಾರದ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಕೆಲವರು ಅಂತ್ಯ ಸಂಸ್ಕಾರ ವಿಚಾರವನ್ನೂ ಸಹ ಟ್ರೋಲ್‌ಗೆ ಬಳಕೆ ಮಾಡಿಕೊಂಡಿದ್ದರು. ವಯೋಸಹಜ ಆರೋಗ್ಯ ಸಮಸ್ಯಯಿಂದ ಅವರ ತಾಯಿ ಸ್ವರ್ಣಲತಾ(85) ಹೈದರಾಬಾದ್‌ನಲ್ಲಿ ಮೃತಪಟ್ಟಿದ್ದರು. ಅವರ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ತಂದು ಅಂತ್ಯಕ್ರಿಯೆ ಪ್ರಕ್ರಿಯೆ ನಡೆಸಲಾಗಿತ್ತು. ಬೆಂಗಳೂರಿನ ಶಾಂತಿನಗರದ ಚರ್ಚ್‌ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ನಂತರ ಆಡುಗೋಡಿ ಸಮೀಪದ ರುದ್ರಭೂಮಿಯಲ್ಲಿ ಕ್ರೈಸ್ತ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿತ್ತು.

ಪ್ರಕಾಶ್ ರಾಜ್ ತಾಯಿ ನಿಧನಕ್ಕೆ ಹಲವರು ಸೋಷಿಯಲ್ ಮೀಡಿಯಾದಲ್ಲಿ ಕಂಬನಿ ಮಿಡಿದಿದ್ದರು. ಈ ವಿಚಾರವಾಗಿ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿದ್ದ ನಟ ಪ್ರಕಾಶ್ ರಾಜ್ ಅವರು, ನಿಮ್ಮ ದಯೆ ಹಾಗೂ ಚಿಂತನಶೀಲ ಮಾತುಗಳಿಗೆ ಎಲ್ಲರಿಗೂ ಧನ್ಯವಾದಗಳು. ಈ ದುಃಖದ ಕ್ಷಣದಲ್ಲಿ ನನಗೆ ಮತ್ತು ನನ್ನ ಕುಟುಂಬಕ್ಕೆ ಇದು ತುಂಬಾ ಅರ್ಥಪೂರ್ಣವಾಗಿತ್ತು. ಎಲ್ಲದಕ್ಕೂ, ಎಲ್ಲರಿಗೂ ಧನ್ಯವಾದಗಳು ಅಮ್ಮ.. ನಿನ್ನನ್ನು ಪ್ರೀತಿಸುತ್ತೇನೆ.. ನಿನ್ನನ್ನು ಮಿಸ್ ಮಾಡಿಕೊಳ್ಳುತ್ತೇನೆ ಎಂದು ನಟ ಪ್ರಕಾಶ್ ರಾಜ್ ಅವರು ಟ್ವೀಟ್ ಮಾಡಿದ್ದರು.

Prakash Raj

Prakash Raj: ನಾಸ್ತಿಕ ಚರ್ಚೆ

ಇನ್ನು ನಟ ಪ್ರಕಾಶ್ ರಾಜ್ ಅವರ ತಾಯಿ ಅವರ ಅಂತ್ಯ ಸಂಸ್ಕಾರವನ್ನು ಕ್ರೈಸ್ತ ಧರ್ಮದ ಅನುಸಾರ ನಡೆಸಿದ್ದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು. ನೀವು ನಾಸ್ತಿಕರು ಎಂದು ಹೇಳಿಕೊಳ್ಳುತ್ತೀರಿ, ಆದರೆ ಕ್ರೈಸ್ತ ಸಂಪ್ರದಾಯದಂತೆ ಅಂತ್ಯ ಸಂಸ್ಕಾರ ನಡೆಸಿದ್ದೀರಿ ಎಂದು ಕೆಲವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್ ಅವರು, ನಾನು ನಾಸ್ತಿಕ. ದೇವರನ್ನು ನಂಬುವುದಿಲ್ಲ, ಅಷ್ಟು ಸಮಯವೂ ನನ್ನ ಬಳಿ ಇಲ್ಲ. ಯಾರದರೂ ಕೇಳಿದರೆ ನನಗೆ ಸಮಯ ಇಲ್ಲ ಅಂತಾಳ್ತೀನಿ ಎಂದು ಸಂದರ್ಶನವೊಂದರಲ್ಲಿ ಈ ಹಿಂದೆ ನಟ ಪ್ರಕಾಶ್ ರಾಜ್ ಅವರು ಹೇಳಿದ್ದರು. ನಾನು ಸನಾತನ ಧರ್ಮದಲ್ಲಿ ಹುಟ್ಟಿಲ್ಲ, ನಾನು ನಮ್ಮ ಅಪ್ಪ, ಅಮ್ಮನಿಗೆ ಹುಟ್ಟಿದ್ದೇನೆ ಎಂದು ಸಹ ಪ್ರಕಾಶ್ ರಾಜ್ ಹೇಳಿಕೊಂಡಿದ್ದಾರೆ.

ದೇವರಲ್ಲಿ ನಂಬಿಕೆ ಇಲ್ಲದವರು ಕ್ರೈಸ್ತ ಪದ್ಧತಿಯಂತೆ ತಾಯಿಯ ಅಂತ್ಯಕ್ರಿಯೆ ಮಾಡಿದ್ದು ಯಾವ ಕಾರಣಕ್ಕೆ ಎಂದು ನೆಟ್ಟಿಗರು ಪ್ರಕಾಶ್ ರಾಜ್ ಅವರ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡು ನೆಟ್ಟಿಗರು ಕೇಳಿದ್ದರು. ಕೆಲವರು ಪ್ರಕಾಶ್ ರಾಜ್ ಅವರನ್ನು ಟ್ಯಾಗ್ ಮಾಡಿ ಕಾಮೆಂಟ್ ಮಾಡಿದ್ದರು.

ನಟ ಪ್ರಕಾಶ್ ರಾಜ್ ಹೇಳಿದ್ದೇನು

ಇನ್ನು ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ನಟ ಪ್ರಕಾಶ್ ರಾಜ್ ಅವರು, ಹೌದು. ನಾನು ದೇವರನ್ನು ನಂಬುವುದಿಲ್ಲ. ಆದರೆ ನನ್ನ ತಾಯಿ ತನ್ನ ದೇವರನ್ನು ನಂಬಿದ್ದವಳು. ಅವಳ ನಂಬಿಕೆಯ ಪ್ರಕಾರ ಸಮಾಧಿ ಮಾಡುವ ಹಕ್ಕನ್ನು ನಿರಾಕರಿಸಲು ನಾನಾದರು ಯಾರು, ಇದು ನಾವು ಒಬ್ಬರಿಗೊಬ್ಬರು ನೀಡುವ ಮೂಲಭೂತ ಗೌರವ, ದ್ವೇಷಿಸುವವರು ಇದನ್ನು ಅರ್ಥಮಾಡಿಕೊಳ್ಳುತ್ತೀರಾ ಎಂದು ಅವರು ಪ್ರಶ್ನಿಸಿದ್ದಾರೆ.


Disclaimer: This content was automatically imported from a third-party source via RSS feed. The original source is: https://kannada.oneindia.com/entertainment/prakash-raj-says-atheist-yet-respectful-performs-mother-s-last-rites-as-per-christian-traditions-449169.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo