Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ | Karnataka Rain Forecast: Orange Alert for 9 Districts; Hailstorms and Heavy Winds Forecasted

Karnataka

oi-Shankrappa Parangi

ಬೆಂಗಳೂರು: ಕರ್ನಾಟಕದಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಶುರುವಾಗಿದೆ. ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 02 ದಿನ ಭರ್ಜರಿ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿ ಸಹಿತ ಗುಡಗು, ಮಿಂಚಿನೊಂದಿಗೆ ಆಲಿಕಲ್ಲು ಮಳೆ ಆಗಲಿದೆ. ಈ ಪೈಕಿ 09 ಜಿಲ್ಲೆಗಳಿಗೆ ಆಲಿಕಲ್ಲು ಮಳೆ (ಆರೆಂಜ್ ಅಲರ್ಟ್‌) ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ.

ಈಗಾಗಲೇ ಧಾರವಾಡ, ಶಿವಮೊಗ್ಗ, ಹಾಸನ, ಬೆಂಗಳೂರು ಮುಂತಾದ ಕಡೆಗಳಲ್ಲಿ ರಾಶಿ ರಾಶಿ ಆಲಿಕಲ್ಲು ಮಳೆ ಆಗಿದೆ. ಅದೇ ರೀತಿ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಆಲಿಕಲ್ಲು ಮಳೆ ಮುಂದುವರಿಯಲಿದೆ ಎಂದು ಕರ್ನಾಟಕ ಹವಾಮಾನ ಕೇಂದ್ರದ ವಿಜ್ಞಾನಿ ಹಾಗೂ ಮುಖ್ಯಸ್ಥರಾದ ಡಾ. ಎನ್. ಪುವಿಯರಸನ್ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಈ ಮುನ್ಸೂಚನೆಯಿಂದ ಕಟಾವಿಗೆ ಸಿದ್ಧವಾದ ಜೋಳ, ಕಲ್ಲಂಗಡಿ, ಮಾವು, ಬಾಳೆ, ಹಲಸು, ಕಾಫಿ ಹಾಗೂ ಇನ್ನಿತರ ಬೆಳೆಗಾರರಲ್ಲಿ ಆತಂಕ ಶುರುವಾಗಿದೆ.

Karnataka Rain Forecast

ಆಲಿಕಲ್ಲು ಮಳೆ ಎಚ್ಚರಿಕೆ ಎಲ್ಲೆಲ್ಲಿ?

ಮುಂದಿನ 48 ಗಂಟೆಗಳಲ್ಲಿ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ ಹಾಗೂ ಬಳ್ಳಾರಿ, ಶಿವಮೊಗ್ಗ ವಿಜಯನಗರ ಮತ್ತು ದಾವಣಗೆರೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಕೊಟ್ಟಿದೆ. ಈ ಜಿಲ್ಲೆಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 50 ರಿಂದ 60 ಕಿಲೋ ಮಿಟರ್ ವೇಗದಲ್ಲಿರಲಿದೆ.

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವೆಡೆ ಸಾಮಾನ್ಯ ಮಳೆ ಆಗಲಿದ್ದು, ಇಲ್ಲಿ ಗಂಟೆಗೆ 30-40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆ ಆಗಲಿದೆ. ಚಾಮರಾಜನಗರ, ಮೈಸೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ಹಾಸನ, ಚಿಕ್ಕಮಗಳೂರು ಮತ್ತು ಕೋಲಾರ ಜಿಲ್ಲೆಗಳು ಉತ್ತಮ ಮಳೆಗೆ ಸಾಕ್ಷಿಯಾಗಲಿವೆ.

ಮಳೆ ನಡುವೆ ಗರಿಷ್ಠ ತಾಪಮಾನ ದಾಖಲು

ರಾಜ್ಯದಲ್ಲಿನ ಗರಿಷ್ಠ ತಾಪಮಾನವು ಕಲಬುರಗಿಯಲ್ಲಿ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಉಳಿದಂತೆ ವಿಜಯಪುರ 36 ಡಿಗ್ರಿ ಸೆಲ್ಸಿಯಸ್, ರಾಯಚೂರು 35.4 ಡಿಗ್ರಿ ಸೆಲ್ಸಿಯಸ್, ಗದಗ 35 ಡಿಗ್ರಿ ಸೆಲ್ಸಿಯಸ್, ಕಾರವಾರ 34.2 ಡಿಗ್ರಿ ಸೆಲ್ಸಿಯಸ್, ಬೀದರ್ 34 ಡಿಗ್ರಿ ಸೆಲ್ಸಿಯಸ್, ಧಾರವಾಡ 34 ಡಿಗ್ರಿ ಸೆಲ್ಸಿಯಸ್, ಮೈಸೂರು 33.8 ಡಿಗ್ರಿ ಸೆಲ್ಸಿಯಸ್, ಬೆಳಗಾವಿ 33.4 ಡಿಗ್ರಿ ಸೆಲ್ಸಿಯಸ್, ಮಂಗಳೂರು 33.1ಡಿಗ್ರಿ ಸೆಲ್ಸಿಯಸ್, ಚಿತ್ರದುರ್ಗ 32.8 ಡಿಗ್ರಿ ಸೆಲ್ಸಿಯಸ್, ಬೆಂಗಳೂರು 32.3 ಡಿಗ್ರಿ ಸೆಲ್ಸಿಯಸ್, ಹೊನ್ನಾವರ 32.2 ಡಿಗ್ರಿ ಸೆಲ್ಸಿಯಸ್ ಮತ್ತು ಬೆಂಗಳೂರು ಎಚ್ಎಎಲ್ 32 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಬೆಂಗಳೂರು ಹವಾಮಾನ ವರದಿ

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳವರೆಗೆ ಭಾಗಶಃ ಮೋಡ ಕವಿದ ವಾತಾವರಣ. ಮಧ್ಯಾಹ್ನ/ಸಂಜೆ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಬಿರುಗಾಳಿಯೊಂದಿಗೆ (ಗಂಟೆಗೆ 30-40 ಕಿ.ಮೀ) ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಬೆಂಗಳೂರು ಉತ್ತರದಲ್ಲಿ 1.6 ಮಿಮೀ ಮಳೆ

ಮಂಗಳವಾರ ಸಂಜೆ ಹಠಾತ್ ಸುರಿದ ಪೂರ್ವ ಮುಂಗಾರು ಮಳೆಗೆ ಬೆಂಗಳೂರಿನ ಉತ್ತರ ಭಾಗದ ಬಹುತೇಕ ಬಡಾವಣೆಗಳಲ್ಲಿ ಮಳೆಗಾಲದ ಅನುಭವವಾಯಿತು. ಸುಮಾರು ಹದಿನೈದು ನಿಮಿಷಗಳ ಕಾಲ ಯಲಹಂಕ, ದೇವನಹಳ್ಳಿ, ಸಂಜಯ್ ನಗರ, ಲೊಟ್ಟೆಗೊಲ್ಲಹಳ್ಳಿ, ಆರ್‌ಎಂವಿ ಎರಡನೇ ಹಂತ, ಬಿಇಎಲ್ ರಸ್ತೆ ಮತ್ತು ವಿದ್ಯಾರಣ್ಯಪುರದ ಕೆಲವು ಭಾಗಗಳಲ್ಲಿ ಆಲಿಕಲ್ಲುಗಳು ಮಳೆ ಆಯಿತು. ಉಳಿದ ಕೆಲವೆಡೆ ಸಾಮಾನ್ಯ ಮಳೆ ಆಯಿತು. ಯಲಹಂಕ ನ್ಯೂ ಟೌನ್‌ನಲ್ಲಿ ಕಾರುಗಳು ಮತ್ತು ರಸ್ತೆಗಳ ಮೇಲೆ ಬೆಣಚುಕಲ್ಲು ಗಾತ್ರದ ಆಲಿಕಲ್ಲು ಬಿದ್ದ ಬಗ್ಗೆ ಸೆರೆ ಹಿಡಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದವು.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-rain-forecast-orange-alert-for-9-districts-hailstorms-and-heavy-winds-forecasted-447599.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo