Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ | Karnataka Rain Forecast: Showers Likely in Several Regions March 15 and 16 Here’s Bengaluru Weather Update

Karnataka

oi-Hitesh Y

Rain In Karnataka: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ ಒಣಹವೆ ಮುಂದುವರಿದಿದೆ. ಆದರೆ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಾದ್ಯಂತ ತಾಪಮಾನ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ. ಅಲ್ಲದೆ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡು ವಲಯಗಳಲ್ಲಿ ಇನ್ನೊಂದು ವಾರದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ.

ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ಶ್ರೀಲಂಕಾದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ಎತ್ತರದಲ್ಲಿ ಮೇಲ್ಭಾಗದ ವಾಯು ಚಂಡಮಾರುತದ ಪರಿಚಲನೆ ಇರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಆದರೆ ಮುಂದಿನ ಮೂರು ದಿನಗಳ ವರೆಗೆ ಮಳೆಗೆ ಸಂಬಂಧಿಸಿದಂತೆ ಯಾವುದೇ ಮುನ್ಸೂಚನೆ ಇಲ್ಲ. ರಾಜ್ಯದಲ್ಲಿ ಗರಿಷ್ಠ ತಾಪಮಾನ ಹೆಚ್ಚಾಗುತ್ತಿದೆ. ಇನ್ನೂ ಒಂದು ವಾರಯಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಉಳಿದಂತೆ ತಾಪಮಾನದಲ್ಲಿ ಮಹತ್ವದ ಬದಲಾವಣೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

Rain

Rain ಎಲ್ಲೆಲ್ಲಿ ಮಳೆ

ಮುಂದಿನ ಒಂದು ವಾರದ ಅವಧಿಯಲ್ಲಿ ರಾಜ್ಯದ ವಿವಿಧ ಭಾಗದಲ್ಲಿ ಸಣ್ಣ ಮಳೆ ಆಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ಕಡೆಯಿಂದ ಬೀಸುತ್ತಿರುವ ಗಾಳಿಯು ಪ್ರಬಲವಾಗುತ್ತಿರುವುದರಿಂದ ಮುಂದಿನ ಒಂದು ವಾರ ಅವಧಿಯಲ್ಲಿ ವಿವಿಧ ಭಾಗದಲ್ಲಿ ಮಳೆ ಆಗುವ ನಿರೀಕ್ಷೆ ಇದೆ. ಇನ್ನು ಕರ್ನಾಟಕದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಅಧಿಕ ತಾಪಮಾನ ಇದೆ. ಆದರೆ ಅಲ್ಲಲ್ಲಿ ಮೋಡ ಕವಿದ ವಾತಾವರಣವಿದೆ. ಮಾರ್ಚ್ 15 ಅಥವಾ 16ರಿಂದ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣದ ವಿವಿಧ ಪ್ರದೇಶಗಳಲ್ಲಿ ತುಂತುರು ಮಳೆ ಆಗುವ ನಿರೀಕ್ಷೆ ಇದೆ.

ಬೆಂಗಳೂರಿನಲ್ಲಿ ಹೇಗಿದೆ ಹವಾಮಾನ

ಇನ್ನು ಬೆಂಗಳೂರಿನಲ್ಲಿ ತಾಪಮಾನವು ಹೆಚ್ಚಾಗುತ್ತಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32 ಡಿಗ್ರಿ ಸೆಲ್ಸಿಯಸ್ ಹಾಗೂ 19 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮುನ್ಸೂಚನೆ ನೀಡಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕಲಬುರಗಿಯಲ್ಲಿ ಗರಿಷ್ಠ ತಾಪಮಾನವು 38.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ರಾಜ್ಯದ ಸಮತಟ್ಟಾದ ಪ್ರದೇಶ ಮಂಡ್ಯ ಭಾಗದಲ್ಲಿ ಕನಿಷ್ಠ ತಾಪಮಾನವು 18.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

24 ಗಂಟೆಗಳಲ್ಲಿ ಹವಾಮಾನ ಹೇಗಿತ್ತು

ಇನ್ನು ಕಳೆದ 24 ಗಂಟೆ ಅವಧಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹೆಚ್ಚಿತ್ತು. ಆದರೆ ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ ಕಡಿಮೆ (1.6 ಸೆಲ್ಸಿಯಸ್‌ ನಿಂದ – 3ಡಿಗ್ರಿ ಸೆಲ್ಸಿಯಸ್‌) ಇತ್ತು. ಉಳಿದ ಸ್ಥಳಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಕಡಿಮೆ ಇತ್ತು.

ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಕರ್ನಾಟಕದಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3.1ಡಿಗ್ರಿ ಸೆಲ್ಸಿಯಸ್‌ನಿಂದ 5 ಡಿಗ್ರಿ ಸೆಲ್ಸಿಯಸ್‌ ಗಮನಾರ್ಹವಾಗಿ ಹೆಚ್ಚಿತ್ತು. ಕರಾವಳಿ ಕರ್ನಾಟಕದ ಕೆಲವು ಸ್ಥಳಗಳಲ್ಲಿ ಮತ್ತು ಒಳನಾಡಿನ ಕರ್ನಾಟಕದಲ್ಲಿ ಸಾಮಾನ್ಯಕ್ಕಿಂತ 1.6 ಡಿಗ್ರಿ ಸೆಲ್ಸಿಯಸ್‌ನಿಂದ 3 ಡಿಗ್ರಿ ಸೆಲ್ಸಿಯಸ್ ಇತ್ತು. ಆದರೆ, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯಕ್ಕಿಂತ (-1.6° C ನಿಂದ -3ಡಿಗ್ರಿ ಸೆಲ್ಸಿಯಸ್) ಕಡಿಮೆ ಇತ್ತು. ಉಳಿದ ಸ್ಥಳಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯವಾಗಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-rain-forecast-showers-likely-in-several-regions-march-15-and-16-here-s-bengaluru-weather-446661.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo