Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್‌ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ | Actress Rashmika Mandanna Slams Viral Audio Claim, Warns of Legal Action Over Privacy Violation

Entertainment

oi-Madhusudhan KR

Rashmika Mandanna: ನಟಿ ರಶ್ಮಿಕಾ ಮಂದಣ್ಣ ಅವರ ತಾಯಿ ಸುಮನ್‌ ಮಂದಣ್ಣ ಅವರದ್ದು ಎನ್ನಲಾದ ಆಡಿಯೋವೊಂದು ವೈರಲ್‌ ಆಗಿತ್ತು. ಇದಕ್ಕೆ ಸಂಬಂಧಪಟ್ಟಂತೆ ರಶ್ಮಿಕಾ ಮಂದಣ್ಣ ಅವರು ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಸುದೀರ್ಘ ಬರಹದ ಪೋಸ್ಟ್‌ಗಳನ್ನು ಹಂಚಿಕೊಂಡು ತಿರುಗೇಟು ಕೊಟ್ಟಿದ್ದಾರೆ.

“ಸುಮಾರು 8 ವರ್ಷಗಳಷ್ಟು ಹಳೆಯದಾದ, ತಮ್ಮ ತಾಯಿ ಸುಮನ್ ಮಂದಣ್ಣ ಅವರದ್ದು ಎನ್ನಲಾದ ಖಾಸಗಿ ಸಂಭಾಷಣೆಯನ್ನು ಯಾರೋ ಬೇಕು ಅಂತಲೇ ಅನಧಿಕೃತವಾಗಿ ರೆಕಾರ್ಡ್ ಮಾಡಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರಿಂದ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಕಿರುಕುಳ ಆಗುತ್ತಿದೆ,” ಎಂದು ರಶ್ಮಿಕಾ ಆರೋಪಿಸಿದ್ದಾರೆ.

Actress Rashmika Mandanna Slams Viral Audio Claim Warns of Legal Action Over Privacy Violation

‘ವ್ಯೂವ್ಸ್‌, ಎಂಗೇಜ್‌ಮೆಂಟ್‌ಗಾಗಿ ಕೀಳುಮಟ್ಟದ ಕೆಲಸ’

“ನಾನು ಹೇಳಿದ ಮಾತುಗಳನ್ನು ಉದ್ದೇಶಪೂರ್ವಕವಾಗಿ ಸಂದರ್ಭಕ್ಕೆ ತಕ್ಕಂತೆ ಬಳಸದೆ, ಸುಳ್ಳು ಕಥೆಗಳನ್ನು ಸೃಷ್ಟಿಸಿ, ವಿವಾದವನ್ನು ಹುಟ್ಟಿಹಾಕುವ ಪ್ರಯತ್ನ ನಡೆಯುತ್ತಿದೆ. ಕೇವಲ ವ್ಯೂವ್ಸ್‌ ಮತ್ತು ಎಂಗೇಜ್‌ಮೆಂಟ್‌ಗಾಗಿ ಇಂತಹ ಕೀಳುಮಟ್ಟದ ಕೆಲಸಗಳನ್ನು ಮಾಡಲಾಗುತ್ತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ಸುಮಾರು 8 ವರ್ಷಗಳ ಹಿಂದಿನ ಹಳೆಯ ಖಾಸಗಿ ಸಂಭಾಷಣೆಯನ್ನು, ಸಂಬಂಧಪಟ್ಟವರ ಗಮನಕ್ಕೂ ಬಾರದೆ ಅಥವಾ ಅನುಮತಿಯಿಲ್ಲದೆ ರೆಕಾರ್ಡ್ ಮಾಡಿ ರಿಲೀಸ್‌ ಮಾಡಲಾಗಿದೆ. ಆ ಸಂಭಾಷಣೆಯ ಒಂದು ಸಣ್ಣ ಭಾಗವನ್ನು ಉದ್ದೇಶಪೂರ್ವಕವಾಗಿ ಸಂದರ್ಭಕ್ಕೆ ತಕ್ಕಂತೆ ಬಳಸದೆ, ಮತ್ತೊಂದು ವಿವಾದವನ್ನು ಸೃಷ್ಟಿಸಲು ಬಳಸಿಕೊಳ್ಳಲಾಗಿದೆ. ನನ್ನ ವೈಯಕ್ತಿಕ ಜೀವನದ ಇತ್ತೀಚಿನ ಬೆಳವಣಿಗೆ ಜೊತೆಯಲ್ಲೇ ಇದೆಲ್ಲ ನಡೆದಿದೆ.

“ಕಾನೂನು ಕ್ರಮ ಕೈಗೊಳ್ಳಲಾಗುವುದು”

ಮಾಧ್ಯಮ ಮತ್ತು ಆನ್‌ಲೈನ್ ವೇದಿಕೆಗಳಲ್ಲಿ ಇಂತಹ ಕಿರುಕುಳ ಮತ್ತು ದಾಳಿಗಳನ್ನು ತಾಳ್ಮೆಯಿಂದ ಸಹಿಸಿಕೊಂಡು ಬಂದಿದ್ದೆವು. ಆದರೆ, ಈ ಬಾರಿ ಮಿತಿ ಮೀರಿದೆ. ಕಳೆದ 24 ಗಂಟೆಗಳ ಘಟನೆಗಳು ತಾವು ತಾಳ್ಮೆ ಕಳೆದುಕೊಳ್ಳುವಂತೆ ಮಾಡುತ್ತಿವೆ. ಈ ವಿವಾದವು ತನ್ನ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ಅನಗತ್ಯ ತೊಂದರೆ ಉಂಂಟುಮಾಡಿದೆ.

ಹೀಗಾಗಿ, ಈ ಆಡಿಯೋ ಅಥವಾ ಅದಕ್ಕೆ ಸಂಬಂಧಿಸಿದ ತಪ್ಪು ಮಾಹಿತಿಗಳನ್ನು ಹಂಚಿಕೊಳ್ಳುತ್ತಿರುವ ಮಾಧ್ಯಮಗಳು, ಇನ್‌ಫ್ಲುಯೆನ್ಸರ್‌ಗಳು ಮತ್ತು ವೈಯಕ್ತಿಕ ಖಾತೆಗಳಿಗೆ 24 ಗಂಟೆಗಳ ಕಾಲಾವಕಾಶ ನೀಡಲಾಗಿದೆ. ಅದರೊಳಗೆ ಇದನ್ನು ಡಿಲೀಟ್ ಮಾಡದಿದ್ದರೆ ಕಾನೂನಿನ ಮೊರೆ ಹೋಗಿ ನೋಟಿಸ್ ಜಾರಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ

ಈ ವಿಷಯಕ್ಕೆ ಸಂಬಂಧ ಇಲ್ಲದವರನ್ನು ಅನಗತ್ಯವಾಗಿ ಮುಜುಗರಕ್ಕೆ ದೂಡಿದ್ದಾರೆ. ಇದು ಗೌಪ್ಯತೆಯ ಗಂಭೀರ ಉಲ್ಲಂಘನೆ, ದಾರಿ ತಪ್ಪಿಸುವ, ಮಾನಹಾನಿಕರ ವಿಷಯಗಳ ಪ್ರಸಾರವಾಗಿದೆ. ನಾವು ಜೀವನದಲ್ಲಿ ಮುಂದೆ ಸಾಗುತ್ತ, ಬೆಳೆಯುತ್ತ, ಅರ್ಥಪೂರ್ಣ ಕೆಲಸಗಳನ್ನು ಮಾಡುತ್ತ ಧನಾತ್ಮಕವಾಗಿ ಬೆಳೆಯುತ್ತಿರುವಾಗ, ಕೆಲವರು ಇನ್ನೊಬ್ಬರ ಘನತೆ, ಶಾಂತಿಯನ್ನು ಹಾಳು ಮಾಡುತ್ತಿರುವುದು ದುರದೃಷ್ಟಕರ. ಕಳೆದ 8 ವರ್ಷಗಳಿಂದ ನನ್ನ ಮೇಲೆ ದಾಳಿ ಮಾಡಿದಾಗ ನಾನು ಮೌನವಾಗಿದ್ದೆ. ಆದರೆ, ಇಂದು ಬೇರೆಯವರನ್ನು ಇದಕ್ಕೆ ಎಳೆದು ತಂದಾಗ, ನಾನು ಸುಮ್ಮನೆ ಇರಲು ಸಾಧ್ಯವಿಲ್ಲ.

ಇಲ್ಲಿ ತನಕ ನನಗೆ ತುಂಬಾ ಜನ ಪ್ರೀತಿಯಿಂದ ಸಪೋರ್ಟ್ ಮಾಡಿದ್ದೀರ. ಅವರೆಲ್ರಿಗೂ ತುಂಬು ಹೃದಯದ ಧನ್ಯವಾದಗಳು. ಒಂದ್ ಮಾತು ಈ ಸಮಯದಲ್ಲಿ ಹೇಳಲೇಬೇಕು ಅನ್ಸಿದೆ – ಬೇಕಂತ ನಮ್ಮ ಖಾಸಗಿ ಜೀವನದ ಬಗ್ಗೆ ಬೈಕೊಂಡ್ ಮಾತನಾಡೋ ಜನ, ಒಂದ್ ಅರ್ಥ ಮಾಡ್ಕೊಬೇಕು – ಅವರೆಲ್ಲ ನನ್ನ ಜೀವನ ಹೇಗಿರಬೇಕು ಅಂತ ನಿರ್ಧಾರ ಮಾಡಕ್ಕಾಗತ್ತಾ? ನಮ್ ಜೀವನ ನಮ್ಗಲ್ವಾ? ನಮ್ ನಿರ್ಧಾರ ನಾವೇ ತೊಗೋಬೇಕು ಮತ್ತೆ ತೊಗೋತೀವಿ ಕೂಡ ಎಂದು ಬರೆದುಕೊಂಡು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಈ ಖುಷಿಯ ಸಂದರ್ಭದಲ್ಲಿ ಇಂತಹ ಹಳೆಯ ವಿಚಾರಗಳನ್ನು ಕೆದಕಿ ವಿವಾದ ಸೃಷ್ಟಿಸುತ್ತಿರುವುದು ತಮಗೆ ನೋವು ತಂದಿದೆ. ತನ್ನ ಕುಟುಂಬವನ್ನು ಮತ್ತು ಆಪ್ತರನ್ನು ಈ ಅನಗತ್ಯ ವಿವಾದಕ್ಕೆ ಎಳೆದುತಂದಿದ್ದಾದೆ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಟ್ಟಾರೆಯಾಗಿ, ತಮಗೆ ಮತ್ತು ತಮ್ಮ ಕುಟುಂಬಕ್ಕೆ ಆಗುತ್ತಿರುವ ಈ ಕಿರುಕುಳದ ವಿರುದ್ಧ ರಶ್ಮಿಕಾ ಮಂದಣ್ಣ ಈಗ ಕಾನೂನಿನ ಮೂಲಕ ಹೋರಾಡಲು ನಿರ್ಧರಿಸಿದ್ದಾರೆ.

Disclaimer: This content was automatically imported from a third-party source via RSS feed. The original source is: https://kannada.oneindia.com/entertainment/actress-rashmika-mandanna-slams-viral-audio-claim-warns-of-legal-action-over-privacy-violation-446887.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo