
Karnataka
oi-Madhusudhan KR
Ration Card: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸುವ ಕಾರ್ಯ ಮುಂದುವರೆದಿದೆ. ಈ ನಡುವೆಯೇ ಪಡಿತರ ಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ, ಏನೆಲ್ಲಾ ತಿದ್ದುಪಡಿ ಮಾಡಿಸಬಹುದು ಹಾಗೂ ಬೇಕಾಗುವ ದಾಖಲೆಗಳು ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.
ಪಡಿತರ ಚೀಟಿ ತಿದ್ದುಪಡಿ ಮಾಡಿಸಲು ಕಾಯುತ್ತಿರುವ ರಾಜ್ಯದ ಜನತೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗುಡ್ ನ್ಯೂಸ್ ನೀಡಿದ್ದು, 2026ನೇ ಸಾಲಿನ ರೇಷನ್ ಕಾರ್ಡ್ ತಿದ್ದುಪಡಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ. ಆನ್‌ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 31ರ ವರೆಗೂ ಅವಕಾಶ ಕಲ್ಪಿಸಲಾಗಿದೆ.

ಏನೆಲ್ಲ ತಿದ್ದುಪಡಿ ಮಾಡಿಸಬಹುದು?
* ಹೊಸ ಸದಸ್ಯರ ಹೆಸರು ಸೇರ್ಪಡೆ
* ವಿಳಾಸ ಬದಲಾವಣೆ ಹಾಗೂ ಮೊಬೈಲ್ ಸಂಖ್ಯೆ ಜೋಡಣೆ
* ಹೆಸರು ತೆಗೆದುಹಾಕುವುದು
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಫೋಟೋ ಬದಲಾವಣೆ
* ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣಪತ್ರ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ)
ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆಗೆ ಬೇಕಾದ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ತಿದ್ದುಪಡಿಗೆ ಎಲ್ಲೆಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು?
ರೇಷನ್ ಕಾರ್ಡ್ ತಿದ್ದುಪಡಿಯನ್ನು ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಸೇರಿದಂತೆ ಸೈಬರ್ ಸೆಂಟರ್‌ಗಳಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದು. ಇಲ್ಲಿ ಹೊಸ ರೇಷನ್ ಕಾರ್ಡ್‌ಗೂ ಸಹ ಅರ್ಜಿ ಸಲ್ಲಿಕೆ ಮಾಡಬಹುದು. ಆದರೆ, ಇದಕ್ಕೆ ಇನ್ನೂ ಅವಕಾಶ ಕಲ್ಪಿಸಲಾಗಿಲ್ಲ.
ಪಡಿತರ ಚೀಟಿ ತಿದ್ದುಪಡಿ ವಿಧಾನಗಳು
* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
* ಅರ್ಜಿ ಸಲ್ಲಿಕೆ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್ ಆಗಿರುವ ಹೊಸ ರೇಷನ್ ಕಾರ್ಡ್ ನಿಮ್ಮ ಮನೆಗೆ ಬರಲಿದೆ.
ಅರ್ಜಿ ಸ್ಥಿತಿ ಪರಿಶೀಲಿಸುವುದು ಅಗತ್ಯ
ಆನ್‌ಲೈನ್‌ನಲ್ಲಿ ಸರ್ವರ್ ಸಮಸ್ಯೆ ಎದುರಾದರೆ ಬೆಳಗ್ಗೆ ಅಥವಾ ರಾತ್ರಿ 8 ಗಂಟೆಯ ನಂತರ ಅರ್ಜಿ ಸಲ್ಲಿಸುವುದು ಉತ್ತಮ. ಅರ್ಜಿ ಸಲ್ಲಿಸಿದ ನಂತರ ಸಿಗುವ ಸ್ವೀಕೃತಿ ಪತ್ರವನ್ನು ಕಡ್ಡಾಯವಾಗಿ ಸುರಕ್ಷಿತವಾಗಿ ಇಟ್ಟುಕೊಳ್ಳಿ. ಅರ್ಜಿ ಸ್ಥಿತಿಯನ್ನು ಪರಿಶೀಲಿಸಲು ಇದು ಅತ್ಯಗತ್ಯವಾಗಿದೆ. ಅರ್ಜಿ ಸಲ್ಲಿಸಿದ 15ರಿಂದ 30 ದಿನಗಳ ಒಳಗಾಗಿ ತಿದ್ದುಪಡಿಸ ಮಾಡಲಾದ ಹೊಸ ರೇಷನ್ ಕಾರ್ಡ್ ನಿಮ್ಮ ಕೈ ಸೇರಲಿದೆ. ತುರ್ತು ಅಗತ್ಯ ಇದ್ದರೆ ಮಾತ್ರ, ಪ್ರಕ್ರಿಯೆಗಳು ಪೂರ್ಣಗೊಂಡ 7 ರಿಂದ 10 ದಿನಗಳಲ್ಲಿ ಸಿಗಲಿದೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-ration-card-update-2026-government-allows-correction-until-march-31-2026-know-details-446229.html. xn--babytilbehr-pgb.com does not claim ownership of this content. All rights remain with the original publisher.
