
Sports
oi-Madhusudhan KR
RCB IPL 2026: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತು. ಪಂದ್ಯದ ಬಳಿಕ ಮಾತನಾಡಿದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರ ಫಿನಿಶಿಂಗ್ ಕೌಶಲವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.
ಮತ್ತೊಂದೆಡೆ, ಸಿಎಸ್‌ಕೆ ತಂಡ ಸೋಲಿನ ಹಾದಿ ಹಿಡಿದಿದೆ. ಈ ಸೀಸನ್‌ನಲ್ಲಿ ಸತತ ಮೂರನೇ ಸೋಲು ಅನುಭವಿಸಿರುವ ಚೆನ್ನೈ, 2024ರ ಸೀಸನ್‌ನಿಂದ ಈವರೆಗೆ ಆರ್‌ಸಿಬಿ ವಿರುದ್ಧ ಸತತ ನಾಲ್ಕನೇ ಸೋಲನ್ನು ಕಂಡಿದೆ. ಗಾಯದಿಂದ ದಿಗ್ಗಜ ಆಟಗಾರ ಎಂ.ಎಸ್.ಧೋನಿ ಹೊರಗುಳಿದಿದ್ದು, ಋತುರಾಜ್ ಗಾಯಕ್ವಾಡ್ ನಾಯಕತ್ದ ತಂಡಕ್ಕೆ ಜಯ ಒಲಿದಂತೆ ಕಾಣುತ್ತಿಲ್ಲ.

ಸೀಸನ್ ಆರಂಭಕ್ಕೂ ಮುನ್ನವೇ ರಾಜಸ್ಥಾನ್ ರಾಯಲ್ಸ್ ಜೊತೆ ಬೃಹತ್ ಮೊತ್ತದ ಆಟಗಾರರ ಅದಲು-ಬದಲು ಪ್ರಕ್ರಿಯೆ ನಡೆಸಿ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಬಳಿಕ ಯುವ ಆಟಗಾರರ ಮೇಲೆ ಹೆಚ್ಚಿನ ಹೂಡಿಕೆ ಮಾಡಿದ್ದರೂ ಸಹ ಏನು ಪ್ರಯೋಜನ ಆಗದಂತಾಗಿದೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಮೋಘ ಗೆಲುವು ಸಾಧಿಸಿದೆ. ಈ ಗೆಲುವಿನ ನಂತರ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಅವರು ತಂಡದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ ಅವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಇದು ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ.
ಟಿಮ್ ಡೇವಿಡ್ ಅಬ್ಬರದ ಬ್ಯಾಟಿಂಗ್
ಪಂದ್ಯದ ಕೊನೆಯ ಹಂತದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಆರ್‌ಸಿಬಿಗೆ ಗೆಲುವು ತಂದುಕೊಟ್ಟರು. ಇವರ ಫಿನಿಶಿಂಗ್ ಕೌಶಲಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪಾಟಿದಾರ್, “ನಾನು ಕಂಡ ಅತ್ಯುತ್ತಮ ಫಿನಿಶರ್‌ಗಳಲ್ಲಿ ಇವರು ಒಬ್ಬರು” ಎಂದು ಕೊಂಡಾಡಿದ್ದಾರೆ.
ಸಂಜು ಸ್ಯಾಮ್ಸನ್ ಬಂದರೂ ತಪ್ಪದ ಸೋಲು
ರಾಜಸ್ಥಾನ್ ರಾಯಲ್ಸ್‌ನಿಂದ ಬೃಹತ್ ಮೊತ್ತಕ್ಕೆ ಸಂಜು ಸ್ಯಾಮ್ಸನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದರೂ, ಚೆನ್ನೈ ತಂಡಕ್ಕೆ ಇನ್ನೂ ಗೆಲುವಿನ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ. ಯುವ ಆಟಗಾರರ ಮೇಲೆ ಹೂಡಿಕೆ ಮಾಡಿದ್ದರೂ ಎಂ.ಎಸ್.ಧೋನಿ ಅನುಪಸ್ಥಿತಿಯಲ್ಲಿ ತಂಡದ ಪ್ರದರ್ಶನ ಮಂಕಾಗಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.
ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಹೇಳಿದ್ದೇನು?
“ತಂಡದ ಪ್ರದರ್ಶನ ತುಂಬಾ ತೃಪ್ತಿ ನೀಡಿದೆ. ಆರಂಭದಲ್ಲಿ ಪಿಚ್ ಸ್ವಲ್ಪ ನಿಧಾನವಾಗಿತ್ತು, ಆದರೆ ಫಿಲ್ ಸಾಲ್ಟ್ ಮತ್ತು ವಿರಾಟ್ ಭಾಯ್ ಅದ್ಭುತವಾಗಿ ಇನ್ನಿಂಗ್ಸ್ ಕಟ್ಟಿಕೊಟ್ಟರು. ಆ ನಂತರ ಬ್ಯಾಟರ್‌ಗಳು ಸಿಡಿಸಿದ ಸಿಕ್ಸರ್‌ಗಳನ್ನು ನೋಡುವುದೇ ಒಂದು ಸಂಭ್ರಮವಾಗಿತ್ತು,” ಎಂದು ರಜತ್ ಪಾಟಿದಾರ್ ಸಂಸತ ಹಂಚಿಕೊಂಡಿದ್ದಾರೆ.
Disclaimer: This content was automatically imported from a third-party source via RSS feed. The original source is: https://kannada.oneindia.com/news/sports/rajat-patidar-praises-david-s-finishing-as-royal-challengers-bengaluru-crush-csk-in-ipl-2026-clash-449577.html. xn--babytilbehr-pgb.com does not claim ownership of this content. All rights remain with the original publisher.
