
Sports
oi-Madhusudhan KR
RCB Playing 11 IPL 2026: ಗುವಾಹಟಿಯಲ್ಲಿ ಇಂದು (ಏಪ್ರಿಎಲ್ 10) ನಡೆಯಲಿರುವ ಐಪಿಎಲ್ 2026ರ 16ನೇ ಹೈವೋಲ್ಟೇಜ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ್ ರಾಯಲ್ಸ್ ಅನ್ನು ಎದುರಿಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಹಾಗಾದ್ರೆ ಆಡುವ 11ರ ಬಳಗದಲ್ಲಿ ಯಾರೆಲ್ಲಾ ಇರಲಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಬಾರಿಯ ಐಪಿಎಲ್ ಸೀಸನ್ ಆರಂಭಂದಿಂದಲೂ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಎರಡು ಪ್ರಬಲ ತಂಡಗಳಾದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಶುಕ್ರವಾರ ಗುವಾಹಟಿಯ ಬರ್ಸಾಪಾರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ 16ನೇ ಪಂದ್ಯದ ರೋಚಕ ಹಣಾಹಣಿಗೆ ಸಜ್ಜಾಗಿವೆ.

ಆರ್‌ಸಿಬಿ Vs ರಾಜಸ್ಥಾನ್ ರಾಯಲ್ಸ್
ರಾಜಸ್ಥಾನ್ ರಾಯಲ್ಸ್ ಈವರೆಗೂ ಆಡಿದ ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಅಜೇಯ ಓಟ ಮುಂದುವರೆಸಿದೆ. ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸುವ ಮೂಲಕ ಅಜೇಯವಾಗಿ ಉಳಿದಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿಸಿದೆ. ಮತ್ತೊಂದೆಡೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಗಳಲ್ಲಿ ಗೆದ್ದ ಆರ್‌ಸಿಬಿ ಇಂದಿನ ಪಂದ್ಯದಲ್ಲೂ ಆರ್‌ಆರ ಸೋಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಭರವಸೆಯಲ್ಲಿದೆ
ಆರ್‌ಆರ್ – ಆರ್‌ಸಿಬಿ ಮುಖಾಮುಖಿ ದಾಖಲೆಗಳು
* ಒಟ್ಟು ಆಡಿದ ಪಂದ್ಯಗಳು: 34
* ರಾಜಸ್ಥಾನ್ ರಾಯಲ್ಸ್ ಜಯ: 14
* ರಾಯಲ್ ಚಾಲೆಂಜರ್ಸ್ ಬೆಂಗಳೂರು ಜಯ: 17
ಮುಖಾಮುಖಿ ದಾಖಲೆಯಲ್ಲಿ ಆರ್‌ಸಿಬಿ ತಂಡವು ರಾಜಸ್ಥಾನ್ ವಿರುದ್ಧ ಸ್ವಲ್ಪ ಮೇಲುಗೈ ಸಾಧಿಸಿದೆ. ಆದರೆ, ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಜಯಗಳಿಸಿದರೆ ಈ ಅಂತರ ಮತ್ತಷ್ಟು ಕಡಿಮೆಯಾಗಲಿದೆ. ಆರ್‌ಆರ್‌ನಲ್ಲಿ ಯಶಸ್ವಿ ಜೈಸ್ವಾಲ್ ಆಡಿದ ಎರಡು ಪಂದ್ಯಗಳಲ್ಲೂ ಆಕರ್ಷಕ ಅರ್ಧಶತಕಗಳನ್ನು ಸಿಡಿಸಿದ್ದಾರೆ. ಮತ್ತೊಂದೆಡೆ 15 ವರ್ಷದ ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಈ ಇಬ್ಬರೂ ಐಪಿಎಲ್‌ನ ಅತ್ಯಂತ ವಿನಾಶಕಾರಿ ಆರಂಭಿಕ ಜೋಡಿಯಾಗಿದ್ದಾರೆ.
ಮೊದಲ ಎರಡು ಪಂದ್ಯಗಳಲ್ಲಿ ಆರ್‌ಸಿಬಿ ತಂಡವು ಅನುಭವಿ ವೇಗಿ ಜೋಶ್ ಹ್ಯಾಜಲ್‌ವುಡ್ ಅವರ ಕೌಶಲ್ಯ ಮತ್ತು ಅನುಭವದ ಕೊರತೆಯನ್ನು ಅನುಭವಿಸದಂತೆ ಜೇಕಬ್ ಡಫಿ ನೋಡಿಕೊಂಡಿದ್ದಾರೆ. ಡಫಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. ಹ್ಯಾಜಲ್‌ವುಡ್ ತಂಡಕ್ಕೆ ಯಾವಾಗ ಮರಳುತ್ತಾರೆ ಎಂಬ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲದ ಕಾರಣ, ಅವರ ಸ್ಥಾನವನ್ನು ಡಫಿ ಅವರೇ ತುಂಬಲಿದ್ದಾರೆ.
ಬಲಿಷ್ಠ ತಂಡ ಹೊಂದಿರುವ ಆರ್‌ಆರ್, ಆರ್‌ಸಿಬಿ
ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ಅನುಭವಿ ಮತ್ತು ಯುವ ಆಟಗಾರರ ಅದ್ಭುತ ಸಮತೋಲನವಿದೆ. ರವೀಂದ್ರ ಜಡೇಜಾ ಮತ್ತು ಜೋಫ್ರಾ ಆರ್ಚರ್ ಅವರ ಸೇರ್ಪಡೆಯಿಂದ ತಂಡದ ಬೌಲಿಂಗ್ ಮತ್ತು ಆಲ್‌ರೌಂಡ್ ವಿಭಾಗ ಅತ್ಯಂತ ಬಲಿಷ್ಠವಾಗಿ ಕಾಣುತ್ತಿದೆ. ನಾಯಕನಾಗಿ ರಿಯಾನ್ ಪರಾಗ್ ಅವರು ಇಂದಿನ ಪಂದ್ಯವನ್ನು ಹೇಗೆ ಮುನ್ನಡೆಸುತ್ತಾರೆ ಎಂಬುದು ಕುತೂಹಲಕಾರಿ ವಿಷಯವಾಗಿದೆ.
ಆರ್‌ಸಿಬಿ ತಂಡವು ಈ ಬಾರಿ ಅತ್ಯಂತ ಸಮತೋಲಿತವಾಗಿ ಕಾಣುತ್ತಿದೆ. ರಜತ್ ಪಾಟಿದಾರ್ ಅವರ ನಾಯಕತ್ವದಲ್ಲಿ ತಂಡದ ಆಟಗಾರರು ಅದ್ಭುತವಾಗಿ ಪ್ರದರ್ಶನ ತೋರುತ್ತಾ ಬಂದಿದ್ದಾರೆ. ಬ್ಯಾಟಿಂಗ್‌ನಲ್ಲಿ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರಂತಹ ಸ್ಪೋಟಕ ಆಟಗಾರರಿದ್ದಾರೆ. ಬೌಲಿಂಗ್‌ನಲ್ಲಿ ಅನುಭವಿ ಭುವನೇಶ್ವರ್ ಕುಮಾರ್, ಜೇಕಬ್ ಡಫಿ ಮತ್ತು ಯುವ ಸ್ಪಿನ್ನರ್ ಸುಯಶ್ ಶರ್ಮಾ ಎದುರಾಳಿಗಳಿಗೆ ಸವಾಲೊಡ್ಡಬಲ್ಲರು. ಈ ಎರಡು ಉಭಯ ತಂಡಗಳ ಬಲಿಷ್ಠ ಆಟಗಾರರ ಪಟ್ಟಿಯನ್ನು ನೋಡಿದರೆ, ಇಂದು ಗುವಾಹಟಿಯಲ್ಲಿ ರನ್ ಮಳೆ ಸುರಿಯುವುದು ಗ್ಯಾರಂಟಿ.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ, ನಾಂದ್ರೆ ಬರ್ಗರ್, ತುಷಾರ್ ದೇಶ್‌ಪಾಂಡೆ, ರವಿ ಬಿಷ್ಣೋಯ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ,
ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಸುಯಶ್ ಶರ್ಮಾ.
ಪಂದ್ಯದ ಸಮಯ, ನೇರ ಪ್ರಸಾರದ ವಿವರ
* ಸ್ಥಳ: ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂ
* ಸಮಯ: ಸಂಜೆ 7:30 (ಭಾರತೀಯ ಕಾಲಮಾನ)
* ನೇರಪ್ರಸಾರ: ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳಲ್ಲಿ ಹಾಗೂ ಜಿಯೋ ಹಾಟ್‌ಸ್ಟಾರ್ (JioHotstar) ಆ್ಯಪ್‌ನಲ್ಲಿಯೂ ನೇರಪ್ರಸಾರ ವೀಕ್ಷಣೆ ಮಾಡಬಹುದು.
Disclaimer: This content was automatically imported from a third-party source via RSS feed. The original source is: https://kannada.oneindia.com/news/sports/rcb-playing-xi-vs-rajasthan-royals-ipl-2026-predicted-lineup-match-time-live-streaming-details-450019.html. xn--babytilbehr-pgb.com does not claim ownership of this content. All rights remain with the original publisher.
