
Sports
oi-Madhusudhan KR
RCB Vs CSK Playing 11: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು (ಏಪ್ರಿಲ್ 5) ನಡೆಯಲಿರುವ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡವು ತನ್ನ ಗೆಲುವಿನ ಓಟ ಮುಂದುವರೆಸಲು ಸಜ್ಜಾಗಿದೆ. ಮಾರ್ಚ್ 28ರಂದು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಜಯ ದಾಖಲಿಸಿರುವ ಆರ್‌ಸಿಬಿಯು, ಇಂದಿನ ಪಂದ್ಯದಲ್ಲಿ ಮತ್ತೆ ಗೆಲುವಿನ ಆತ್ಮವಿಶ್ವಾಸದೊಂದಿಗೆ ಕಣಕ್ಕಿಯಲು ಸಕಲ ಸಿದ್ಧತೆ ನಡೆಸಿದೆ. ಹಾಗಾದ್ರೆ, ಪಂದ್ಯದ ಸಮಯ, ನೇರಪ್ರಸಾರ ಹಾಗೂ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಆರ್‌ಸಿಬಿ ತಂಡದ ಅಗ್ರಕ್ರಮಾಂಕದ ಬ್ಯಾಟಿಂಗ್ ಉತ್ತಮವಾಗಿದೆ. ವಿಶೇಷವಾಗಿ ಕನ್ನಡಿಗ ದೇವದತ್ ಪಡಿಕ್ಕಲ್ ಮತ್ತೆ ತಮ್ಮ ಹಳೆಯ ಲಯಕ್ಕೆ ಮರಳಿರುವುದು ತಂಡಕ್ಕೆ ಆನೆಯ ಬಲ ತಂದಿದೆ. ಇವರು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಕೇವಲ 26 ಎಸೆತಗಳಲ್ಲಿ 61 ರನ್ ಚಚ್ಚಿ ಮಿಂಚಿದ್ದರು. ಮತ್ತೊಂದೆಡೆ, ರಜತ್ ಪಾಟಿದಾರ್ ಅವರು ನಾಯಕ ಹಾಗೂ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಎರಡು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಇವರ ಜವಾಬ್ದಾರಿಯುತ ಆಟವು ತಂಡದ ಬ್ಯಾಟಿಂಗ್ ವಿಭಾಗಕ್ಕೆ ಹೆಚ್ಚಿನ ಬಲ ತುಂಬಿದೆ.

ಆರ್‌ಸಿಬಿ ಬೌಲಿಂಗ್‌ನಲ್ಲಿ ಭಾರೀ ಸುಧಾರಣೆ
ಆರ್‌ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲೂ ಗಮನಾರ್ಹ ಸುಧಾರಣೆ ಕಂಡುಬಂದಿದೆ. ಜೋಶ್ ಹ್ಯಾಜಲ್‌ವುಡ್ ಅವರ ಬದಲಿಗೆ ಕಣಕ್ಕಿಳಿದಿದ್ದ ಜೇಕಬ್ ಡಫಿ, ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿ ಮೂರು ಪ್ರಮುಖ ವಿಕೆಟ್ ಕಬಳಿಸುವ ಮೂಲಕ ಬೌಲಿಂಗ್ ಕೊರತೆಯನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಮಧ್ಯಮ ಓವರ್‌ಗಳಲ್ಲಿ ಕೃನಾಲ್ ಪಾಂಡ್ಯ ಮತ್ತು ಸುಯಶ್ ಶರ್ಮಾ ಶಿಸ್ತುಬದ್ಧವಾಗಿ ಬೌಲಿಂಗ್ ಸ್ಪಿನ್ ಮೋಡಿ ಮೂಲಕ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಎಸ್‌ಕೆ ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಹಿನ್ನೆಡೆ
ಆದರೆ, ಸಿಎಸ್‌ಕೆ ತಂಡವು ಈ ಸೀಸನ್‌ನ ಆರಂಭದ ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಭಾರೀ ಹಿನ್ನೆಡೆ ಅನುಭವಿಸಿದೆ. ಅದರಲ್ಲೂ ಸ್ಟಾರ್ ಆಟಗಾರ ಸಂಜು ಸ್ಯಾಮ್ಸನ್ ರನ್ ಗಳಿಸಲು ವಿಫಲರಾಗುತ್ತಿರುವುದು ತಂಡಕ್ಕೆ ದೊಡ್ಡ ಹೊಡೆತ ನೀಡಿದೆ. ಇನ್ನು ಬೌಲಿಂಗ್ ವಿಭಾಗದಲ್ಲಿ ನೂರ್ ಅಹ್ಮದ್ ಮತ್ತು ರಾಹುಲ್ ಚಹರ್ ಅವರಂತಹ ಪ್ರಮುಖ ಬೌಲರ್‌ಗಳು ಹೆಚ್ಚು ರನ್ ಬಿಟ್ಟುಕೊಡುತ್ತಿರುವುದು ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಮಂಗೇಶ್ ಯಾದವ್, ಜೇಕಬ್ ಡಫಿ. ಸುಯಾಶ್ ಶರ್ಮಾ (ಇಂಪ್ಯಾಕ್ಟ್ ಪ್ಲೇಯರ್).
ಸಿಎಸ್‌ಕೆ ಸಂಭಾವ್ಯ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಆಯುಷ್ ಮ್ಹಾತ್ರೆ, ಕಾರ್ತಿಕ್ ಶರ್ಮಾ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ಖಲೀಲ್ ಅಹ್ಮದ್, ನೂರ್ ಅಹ್ಮದ್, ಮ್ಯಾಟ್ ಹೆನ್ರಿ. ರಾಹುಲ್ ಚಹಾರ್ (ಇಂಪ್ಯಾಕ್ಟ್ ಪ್ಲೇಯರ್).
ಆರ್‌ಸಿಬಿ-ಸಿಎಸ್‌ಕೆ ಮುಖಾಮುಖಿ
* ಒಟ್ಟು ಆಡಿದ ಪಂದ್ಯಗಳು: 35
* ಸಿಎಸ್‌ಕೆ ಜಯ: 21
* ಆರ್‌ಸಿಬಿ ಜಯ: 13
ಪಂದ್ಯದ ಸಮಯ, ಸ್ಥಳದ ನೇರ ಪ್ರಸಾರದ ವಿವರ
* ಸ್ಥಳ: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣ
* ಸಮಯ: ಸಂಜೆ 7:30
* ನೇರ ಪ್ರಸಾರ: ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳು ಹಾಗೂ ಆನ್‌ಲೈನ್‌ನಲ್ಲಿ ಜಿಯೋ ಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ನೇರಪ್ರಸಾರ ವೀಕ್ಷಣೆ ಮಾಡಬಹುದು.
Disclaimer: This content was automatically imported from a third-party source via RSS feed. The original source is: https://kannada.oneindia.com/news/sports/ipl-2026-royal-challengers-bengaluru-playing-prediction-11-vs-csk-time-live-streaming-details-449389.html. xn--babytilbehr-pgb.com does not claim ownership of this content. All rights remain with the original publisher.
