RCB Vs SRH: ಎಸ್‌ಆರ್‌ಎಚ್‌ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕಿಂಗ್ ಕುರಿತು ಆರ್‌ಸಿಬಿ ಬಿಗ್‌ ಅಪ್ಡೇಟ್‌ | Royal Challengers Bengaluru Shares Ticket Sale Update for IPL 2026 Opener at M.Chinnaswamy Stadium

Sports

oi-Madhusudhan KR

IPL 2026 RCB Vs SRH: ಕ್ರಿಕೆಟ್‌ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಐಪಿಎಲ್ 19ನೇ ಸೀಸನ್ ಮಾರ್ಚ್ 28ರಿಂದ ಆರಂಭವಾಗಲಿದೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಟನಾ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಎಸ್‌ಆರ್‌ಎಚ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದ ಟಿಕೆಟ್ ಅಧಿಕೃತ ಮಾರಾಟ ಪ್ರಕ್ರಿಯೆ ಕುರಿತು ಆರ್‌ಸಿಬಿ ಬಿಗ್ ಅಪ್ಡೇಟ್‌ ನೀಡಿದೆ.

ಮಾರ್ಚ್ 28 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಈ ಸೀಸನ್‌ನ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ತಂಡವು ಸನ್‌ರೈಸರ್ಸ್ ಹೈದರಾಬಾದ್ ಅನ್ನು ಎದುರಿಸಲಿದೆ. ನಂತರ ಏಪ್ರಿಲ್ 5ರಂದು ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಪಂದ್ಯಗಳನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳಲ್ಲಿ ಈಗಲೇ ಭಾರೀ ಉತ್ಸಾಹ ಮನೆಮಾಡಿದೆ.

Royal Challengers Bengaluru Shares Ticket Sale Update for IPL 2026 Opener at M Chinnaswamy Stadium

ಟಿಕೆಟ್ ಖರೀದಿ ಎಲ್ಲಿ ಮತ್ತು ಹೇಗೆ?

* ಟಿಕೆಟ್‌ಗಳು ಆರ್‌ಸಿಬಿಯ ಅಧಿಕೃತ ವೆಬ್‌ಸೈಟ್ ಮತ್ತು ಆ್ಯಪ್‌ನಲ್ಲಿ ಮಾತ್ರ ಲಭ್ಯವಿರಲಿವೆ. ಯಾವುದೇ ಥರ್ಡ್‌ ಪಾರ್ಟಿ ಆ್ಯಪ್‌ ಅಥವಾ ಅನಧಿಕೃತ ವೆಬ್‌ಸೈಟ್‌ಗಳಿಂದ ಟಿಕೆಟ್ ಖರೀದಿಸದಂತೆ ಅಭಿಮಾನಿಗಳಿಗೆ ಎಚ್ಚರಿಕೆ ನೀಡಲಾಗಿದೆ.

* ಮೊದಲು ಆರ್‌ಸಿಬಿ ಆ್ಯಪ್ ಸದಸ್ಯರಿಗೆ ಟಿಕೆಟ್ ಖರೀದಿಸಲು ಅವಕಾಶ ನೀಡಲಾಗುವುದು, ಬಳಿಕ ಸಾರ್ವಜನಿಕರಿಗೆ ಮುಕ್ತಗೊಳಿಸಲಾಗುತ್ತದೆ.

ಪಂದ್ಯ ವೀಕ್ಷಣೆಗೆ ಬರುವವರಿಗೆ ಮಹತ್ವದ ಮಾಹಿತಿ

* ಉಚಿತ ಮೆಟ್ರೋ ಪ್ರಯಾಣ: ಪಂದ್ಯದ ಟಿಕೆಟ್ ಹೊಂದಿರುವ ಅಭಿಮಾನಿಗಳಿಗೆ ಬೆಂಗಳೂರು ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

* ಪಾರ್ಕಿಂಗ್ ವ್ಯವಸ್ಥೆ: ಟ್ರಾಫಿಕ್ ಸಮಸ್ಯೆ ತಪ್ಪಿಸಲು ಗರುಡಮಾಲ್, ಫ್ರೀಡಂ ಪಾರ್ಕ್ ಮತ್ತು ಸೇಂಟ್ ಜೋಸೆಫ್ ಶಾಲಾ ಆವರಣಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಆದರೆ, ಪಾರ್ಕಿಂಗ್‌ಗಾಗಿ ಮುಂಚಿತವಾಗಿಯೇ ಸ್ಲಾಟ್ ಬುಕ್ ಮಾಡಿಕೊಳ್ಳುವುದು ಕಡ್ಡಾಯವಾಗಿದೆ.

ಸುರಕ್ಷತೆಗೆ ಹೆಚ್ಚಿನ ಆದ್ಯತೆ: ಇನ್ನೂ ಕಳೆದ ಬಾರಿ ಸಂಭವಿಸಿದ ಕಾಲ್ತುಳಿತದಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ಕೆಎಸ್‌ಸಿಎ ಮತ್ತು ಬೆಂಗಳೂರು ಪೊಲೀಸರು ಕಠಿಣ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರವೇಶ ಮತ್ತು ನಿರ್ಗಮನ ದಾರಿಗಳ ನಕ್ಷೆಯನ್ನು ಸೋಮವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಟಿಕೆಟ್ ಬೆಲೆಗಳು ಈ ಬಾರಿ ಸರಿಸುಮಾರು 2,300 ರೂಪಾಯಿನಿಂದ ಆರಂಭವಾಗುವ ನಿರೀಕ್ಷೆಯಿದೆ. ಬೇಡಿಕೆಯ ಮೇರೆಗೆ ಟಿಕೆಟ್ ಬೆಲೆಗಳು ನಿರ್ಧಾರ ಆಗಲಿವೆ ಎಂದು ಹೇಳಲಾಗುತ್ತದೆ. ಅಧಿಕೃತ ವೆಬ್‌ಸೈಟ್ shop.royalchallengers.com ಹಾಗೂ ಆಂಡ್ರಾಯ್ಡ್ ಮತ್ತು ಐಓಎಸ್ ಬಳಕೆದಾರರು ಅಧಿಕೃತ RCB Official App ಮೂಲಕ ಟಿಕೆಟ್ ಬುಕ್ ಮಾಡಬಹುದು.

ಟಿಕೆಟ್‌ಗಳು ಕೇವಲ ಒಂದು ಅಧಿಕೃತ ವೆಬ್‌ಸೈಟ್‌ನಲ್ಲಿ ಮಾತ್ರ ಲಭ್ಯವಿರುತ್ತವೆ. ಇದನ್ನು ಬಿಟ್ಟು ಬೇರೆ ಯಾವುದೇ ವೆಬ್‌ಸೈಟ್ ಅಥವಾ ವ್ಯಕ್ತಿಗಳ ಬಳಿ ಟಿಕೆಟ್ ಖರೀದಿಸದಂತೆ ಅಭಿಮಾನಿಗಳಿಗೆ ಮನವಿ ಮಾಡಲಾಗಿದೆ. ಅನಧಿಕೃತವಾಗಿ ಅಥವಾ ಬ್ಲಾಕ್‌ನಲ್ಲಿ ಟಿಕೆಟ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು. ಅಲ್ಲದೆ, ಕ್ರೀಡಾಂಗಣದ ಪ್ರವೇಶ ದ್ವಾರದಲ್ಲಿ ಟಿಕೆಟ್‌ಗಳನ್ನು ಪರಿಶೀಲಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಲಾಗುತ್ತಿದೆ ಎಂದು ಫ್ರಾಂಚೈಸಿ ತಿಳಿಸಿದೆ.

Disclaimer: This content was automatically imported from a third-party source via RSS feed. The original source is: https://kannada.oneindia.com/news/sports/royal-challengers-bengaluru-shares-ticket-sale-update-for-ipl-2026-opener-at-m-chinnaswamy-stadium-447879.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo