
Karnataka
oi-Pragathi S
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ನಡೆಸುತ್ತಿರುವ 2026ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆಗಳು ಭರದಿಂದ ಸಾಗುತ್ತಿದ್ದು, ಇಂದು (ಮಾರ್ಚ್ 31) ತೃತೀಯ ಭಾಷೆ ಹಿಂದಿ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಆದರೆ ಈ ವರ್ಷದ ‘ಕರ್ನಾಟಕ SSLC ಹಿಂದಿ ಪರೀಕ್ಷೆ 2026’ ಹಲವು ಕಾರಣಗಳಿಗಾಗಿ ವಿಶೇಷವಾಗಿತ್ತು. ಪರೀಕ್ಷೆ ಮುಗಿದ ಬೆನ್ನಲ್ಲೇ ಒಂದಿನ ಪ್ರಶ್ನೆಪತ್ರಿಕೆ ಹೇಗಿತ್ತು ಎನ್ನುವುದರ ಕುರಿತು ವಿಶ್ಲೇಷಣೆ ಮತ್ತು ವಿದ್ಯಾರ್ಥಿಗಳ ಪ್ರತಿಕ್ರಿಯೆ ಹೇಗಿತ್ತು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಮೊದಲಿಗೆ, ಮೂಲ ವೇಳಾಪಟ್ಟಿಯ ಪ್ರಕಾರ ಈ ಪರೀಕ್ಷೆಯು ಮಾರ್ಚ್ 30 ರಂದು ನಡೆಯಬೇಕಿತ್ತು. ಆದರೆ, ಮಹಾವೀರ ಜಯಂತಿ ರಜೆಯ ದಿನಾಂಕ ಬದಲಾವಣೆಯಾದ ಕಾರಣ, ರಾಜ್ಯ ಸರ್ಕಾರ ಮತ್ತು ಶಿಕ್ಷಣ ಇಲಾಖೆಯು ತೃತೀಯ ಭಾಷೆ ಪರೀಕ್ಷೆಯನ್ನು ಮಾರ್ಚ್ 31 ಕ್ಕೆ ಮುಂದೂಡಿತ್ತು. ರಜೆಯ ದಿನಾಂಕದ ಬದಲಾವಣೆಯಿಂದಾಗಿ ವಿದ್ಯಾರ್ಥಿಗಳಿಗೆ ಓದಲು ಒಂದು ದಿನ ಹೆಚ್ಚುವರಿ ಸಮಯ ಸಿಕ್ಕಂತಾಗಿತ್ತು. ಯಾವುದೇ ಗೊಂದಲಗಳಿಲ್ಲದೆ ಇಂದು ರಾಜ್ಯಾದ್ಯಂತ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.

ಪ್ರಶ್ನೆಪತ್ರಿಕೆ ವಿಶ್ಲೇಷಣೆ: ಸರಳ ಹಾಗೂ ನೇರ ಪ್ರಶ್ನೆಗಳು
ಪರೀಕ್ಷೆ ಕೇಂದ್ರದಿಂದ ಹೊರಬಂದ ಬಹುತೇಕ ವಿದ್ಯಾರ್ಥಿಗಳ ಮುಖದಲ್ಲಿ ಮಂದಹಾಸವಿತ್ತು. ಶಿಕ್ಷಕರು ಮತ್ತು ವಿಷಯ ತಜ್ಞರ ಪ್ರಾಥಮಿಕ ವಿಶ್ಲೇಷಣೆಯ ಪ್ರಕಾರ, ಈ ಬಾರಿಯ ಹಿಂದಿ ಪ್ರಶ್ನೆಪತ್ರಿಕೆ ಸುಲಭವಾಗಿತ್ತು. ಪಠ್ಯಪುಸ್ತಕದ ಆಧಾರಿತ ನೇರ ಪ್ರಶ್ನೆಗಳನ್ನು ಕೇಳಲಾಗಿತ್ತು, ಯಾವುದೇ ಸುತ್ತಿಬಳಸುವ ಪ್ರಶ್ನೆಗಳಿರಲಿಲ್ಲ. ಅಲ್ಲದೇ ವಿದ್ಯಾರ್ಥಿಗಳಿಗೆ ಗೊಂದಲ ಹುಟ್ಟಿಸುವಂತಹ ಯಾವುದೇ ಪ್ರಶ್ನೆಗಳಿರಲಿಲ್ಲ.
ವಿಭಾಗವಾರು ನೋಡುವುದಾದರೆ, ವ್ಯಾಕರಣ ವಿಭಾಗವು (Grammar section) ವಿದ್ಯಾರ್ಥಿಗಳಿಗೆ ಸುಲಭವಾಗಿ ಅಂಕ ಗಳಿಸಲು ನೆರವಾಗುವಂತಿತ್ತು. ಗದ್ಯ ಮತ್ತು ಪದ್ಯ ವಿಭಾಗಗಳಿಂದ ಕೇಳಲಾದ ಪ್ರಶ್ನೆಗಳು ನಿರೀಕ್ಷಿತ ಮಾದರಿಯಲ್ಲೇ ಇದ್ದವು. ಪ್ರಬಂಧ ಮತ್ತು ಪತ್ರ ಲೇಖನ ವಿಷಯಗಳು ಪ್ರಚಲಿತ ವಿದ್ಯಮಾನ ಹಾಗೂ ಸಾಮಾನ್ಯ ವಿಷಯಗಳಿಗೆ ಸಂಬಂಧಿಸಿದ್ದಾಗಿದ್ದರಿಂದ ವಿದ್ಯಾರ್ಥಿಗಳಿಗೆ ಬರೆಯಲು ಸುಲಭವಾಯಿತು. ಒಟ್ಟಾರೆಯಾಗಿ, ಸರಿಯಾದ ರೀತಿಯಲ್ಲಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಗಳಿಗೆ ಅತ್ಯುನ್ನತ ಅಂಕ ಗಳಿಸುವುದು ಕಷ್ಟವೇನಲ್ಲ ಎನ್ನುತ್ತಾರೆ ಶಿಕ್ಷಕರು.
ಹೊಸ ನಿಯಮ
2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅತಿ ದೊಡ್ಡ ಬದಲಾವಣೆ ಎಂದರೆ ಈ ಹಿಂದಿನ ವರ್ಷಗಳಲ್ಲಿ ಒಟ್ಟು 625 ಅಂಕಗಳಿಗೆ ಫಲಿತಾಂಶ ನೀಡಲಾಗುತ್ತಿತ್ತು. ಆದರೆ, ಈ ವರ್ಷದಿಂದ ಒಟ್ಟು ಅಂಕಗಳನ್ನು 525 ಕ್ಕೆ ಇಳಿಸಲಾಗಿದೆ. ಶಿಕ್ಷಣ ಇಲಾಖೆಯ ಹೊಸ ಸುತ್ತೋಲೆಯ ಪ್ರಕಾರ, ತೃತೀಯ ಭಾಷೆಯ (ಹಿಂದಿ, ಸಂಸ್ಕೃತ, ಉರ್ದು ಇತ್ಯಾದಿ) ಅಂಕಗಳನ್ನು ವಿದ್ಯಾರ್ಥಿಯ ಅಂತಿಮ ಒಟ್ಟು ಅಂಕಗಳಿಗೆ ಅಥವಾ ಶೇಕಡಾವಾರಿಗೆ ಸೇರಿಸಲಾಗುವುದಿಲ್ಲ.
ಆದರೆ, ಇಲ್ಲಿ ವಿದ್ಯಾರ್ಥಿಗಳು ಗಮನಿಸಬೇಕಾದ ಮುಖ್ಯ ಅಂಶವೊಂದಿದೆ. ಅಂಕಗಳನ್ನು ಒಟ್ಟು ಮೊತ್ತಕ್ಕೆ ಸೇರಿಸದಿದ್ದರೂ, ವಿದ್ಯಾರ್ಥಿಗಳು ತೃತೀಯ ಭಾಷೆ ಪರೀಕ್ಷೆಗೆ ಹಾಜರಾಗುವುದು ಮತ್ತು ಕನಿಷ್ಠ ಉತ್ತೀರ್ಣ (ಪಾಸ್) ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ. ಇದರಲ್ಲಿ ಫೇಲ್ ಆದರೆ ಒಟ್ಟಾರೆ ಫಲಿತಾಂಶದ ಮೇಲೂ ಪರಿಣಾಮ ಬೀರುತ್ತದೆ.
ಮೌಲ್ಯಮಾಪನ ಮತ್ತು ಮುಂದಿನ ಪರೀಕ್ಷೆಗಳು
ಏಪ್ರಿಲ್ 2 ರಂದು ನಡೆಯಲಿರುವ ಸಮಾಜ ವಿಜ್ಞಾನ ಪರೀಕ್ಷೆಯೊಂದಿಗೆ ಎಸ್‌ಎಸ್‌ಎಲ್‌ಸಿಯ ಎಲ್ಲಾ ಪರೀಕ್ಷೆಗಳು (Exam-1) ಮುಕ್ತಾಯಗೊಳ್ಳಲಿವೆ. ಕೆಎಸ್‌ಇಎಬಿ ಮಂಡಳಿಯ ಮಾಹಿತಿಯ ಪ್ರಕಾರ, ಏಪ್ರಿಲ್ 8 ರಿಂದಲೇ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್ 9 ರಿಂದ ಶುರುವಾಗಲಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ, ಮೇ ತಿಂಗಳಲ್ಲಿ 2026ರ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ.
-

Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ
-

Udupi: ಉಡುಪಿ ಜಿಲ್ಲೆಗೆ ‘ಸಂಪೂರ್ಣ ಸಾಕ್ಷರತಾ’ ಸ್ಥಾನಮಾನ, ಶೀಘ್ರವೇ ಘೋಷಣೆ
-

NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ
-

ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ
-

Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು
-

Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್
-

SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ
-

Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು
-

Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ
-

ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್
-

Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ
-

EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ
-

Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ
-

Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ
-

Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ
Disclaimer: This content was automatically imported from a third-party source via RSS feed. The original source is: https://kannada.oneindia.com/news/karnataka/karnataka-sslc-hindi-exam-2026-paper-analysis-easy-questions-but-marks-wont-add-to-final-score-448979.html. xn--babytilbehr-pgb.com does not claim ownership of this content. All rights remain with the original publisher.
