T20 World Cup 2026: ಸೆಮಿಫೈನಲ್ ಸ್ಥಾನಕ್ಕಾಗಿ ಟೀಂ ಇಂಡಿಯಾ ಕಾದಾಟ | T20 World Cup 2026: India Opt to Bowl in Crucial Super 8 Clash Against West Indies: Know details

Sports

oi-Madhusudhan KR

T20 World Cup 2026: ಕೋಲ್ಕತ್ತಾದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಮುಖಾಮುಖಿಗಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೆಮಿಫೈನಲ್‌ನ ಕೊನೆಯ ಉಳಿದ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಈಗಾಗಲೇ ನ್ಯೂಜಿಲೆಂಡ್, ಇಂಗ್ಲೆಂಡ್ ತಂಡಗಳು ತಮ್ಮ ಸೆಮಿಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿವೆ.

ಈಗಾಗಲೇ ಸೂಪರ್ 8 ಹಂತದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ಎರಡೂ ತಂಡಗಳು ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿವೆ. ಮತ್ತೊಂದೆಡೆ, ಈ ಆವೃತ್ತಿಯಲ್ಲಿ ಅತಿ ಹೆಚ್ಚು ಮೊತ್ತ ದಾಖಲಿಸಿರುವ ಸಾಧನೆಯೂ ಎರಡೂ ತಂಡಗಳ ಪಾಲಾಗಿದೆ. ವೆಸ್ಟ್ ಇಂಡೀಸ್ ಜಿಂಬಾಬ್ವೆ ವಿರುದ್ಧ 254/6 ರನ್ ಗಳಿಸಿದ್ದರೆ, ಅದೇ ಎದುರಾಳಿಗಳ ವಿರುದ್ಧ ಭಾರತ ಮೂರು ದಿನಗಳ ಬಳಿಕ 256/4 ರನ್ ಕಲೆಹಾಕಿ ಆ ದಾಖಲೆ ಮುರಿದಿತ್ತು.

T20 World Cup 2026 India Opt to Bowl in Crucial Super 8 Clash Against West Indies Know details

ಭಾನುವಾರ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಎರಡೂ ತಂಡಗಳ ಬ್ಯಾಟಿಂಗ್ ಸಾಮರ್ಥ್ಯ ಉತ್ತಮವಾಗಿದೆ. ಈ ಪಂದ್ಯ ಎರಡೂ ತಂಡಗಳಿಗೂ ಅತ್ಯಂತ ಪ್ರಮುಖವಾಗಿದೆ. ಆದ್ದರಿಂದ ಪಿಚ್‌ ಅನ್ನು ಅರಿತುಕೊಂಡು ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ವೆಸ್ಟ್ ಇಂಡೀಸ್ ವಿರುದ್ಧ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಒಟ್ಟಿನಲ್ಲಿ ಟೀಂ ಇಂಡಿಯಾ ‘ಮಾಡು ಇಲ್ಲವೇ ಮಡಿ’ ಕದನದಲ್ಲಿ ಗೆಲ್ಲಲೇಬೇಕೆನ್ನುವ ಭರವಸೆಯೊಂದಿಗೆ ಅಖಾಡಕ್ಕೆ ಇಳಿದಿದೆ.

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11

ಶಾಯ್ ಡಿಯಾಗೋ ಹೋಪ್ (ನಾಯಕ, ವಿಕೆಟ್ ಕೀಪರ್), ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮಿಯರ್, ರೋವ್‌ಮನ್ ಪಾವೆಲ್, ಶೆರ್ಫೇನ್ ರದರ್‌ಫೋರ್ಡ್, ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಮ್ಯಾಥ್ಯೂ ಫೋರ್ಡ್, ಗುದಕೇಶ್ ಮೋಟಿ, ಅಕೇಲ್ ಹೊಸೈನ್, ಶಮಾರ್ ಜೋಸೆಫ್.

ಟೀಂ ಇಂಡಿಯಾ ಪ್ಲೇಯಿಂಗ್ 11

ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ.

Disclaimer: This content was automatically imported from a third-party source via RSS feed. The original source is: https://kannada.oneindia.com/news/sports/t20-world-cup-2026-india-opt-to-bowl-in-crucial-super-8-clash-against-west-indies-know-details-445591.html. xn--babytilbehr-pgb.com does not claim ownership of this content. All rights remain with the original publisher.

We will be happy to hear your thoughts

Leave a reply

Babytilbehør
Logo